×
Ad

ವೃತ್ತಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ

Update: 2017-01-28 18:48 IST

ಮಂಗಳೂರು, ಜ.28: ಜಿಲ್ಲಾ ಸಾಕ್ಷರತಾ ಸಮಿತಿ, ಜನ ಶಿಕ್ಷಣ ಟ್ರಸ್ಟ್ ಕಂಕನಾಡಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಜಿಲ್ಲೆಯ ನವಸಾಕ್ಷರರಿಗೆ ವೃತ್ತಿ ಕೌಶಲ ತರಬೇತಿಯ ಪೂರ್ವಭಾವಿ ಕಾರ್ಯಾಗಾರ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನೆರವೇರಿತು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕೆ.ಸುಧಾಕರ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್.ರವಿ ಕಾರ್ಯಕ್ರಮವನ್ನು ಸೋಲಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಸಮಾಜದ ಸಮಸ್ಯೆಗಳು ಆಳವಾಗಿ ಬೇರೂರಿರುತ್ತವೆ. ಅಂತೆಯೇ ಅದರ ಪರಿಹಾರ ತಳಮಟ್ಟದಿಂದಾಗಬೇಕು. ಬದಲಾವಣೆ ನಮ್ಮಿಂದಲೇ ಪ್ರಾರಂಭವಾಗಬೇಕು.ಕಟ್ಟಕಡೆಯ ವ್ಯಕ್ತಿಯ ಮುಖದಲ್ಲಿ ಸಂತೋಷ ತರಲು,ಅವರ ಜೀವನದಲ್ಲಿ ನೆಮ್ಮದಿ ಮೂಡಿಸಲು ದುಡಿದಾಗ ವೃತ್ತಿಯಲ್ಲಿ ಸಾರ್ಥಕತೆ ಕಾಣಲು ಸಾಧ್ಯ.

ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್‌ನಲ್ಲಿ ಓರ್ವ ಪ್ರೇರಕರನ್ನು ನೇಮಕ ಮಾಡಿಕೊಳ್ಳಲು ಎಲ್ಲಾ ಗ್ರಾಮ ಪಂಚಾಯತ್ ಅಧಿಕಾರಿಗಳು ತುರ್ತು ಕ್ರಮ ಕೈಗೊಳ್ಳ ಬೇಕು. ನವಸಾಕ್ಷರರಿಗೆ ನೀಡುವ ಕೌಶಲ್ಯಾಭಿವೃದ್ಧಿ ತರಬೇತಿಗೆ ಜಿಲ್ಲಾ ಪಂಚಾಯತ್ ಸಂಪೂರ್ಣ ಸಹಕಾರ ನೀಡುತ್ತದೆ ಎಂಬುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಎನ್.ಆರ್.ಉಮೇಶ್, ಜಿಲ್ಲೆಯಲ್ಲಿ ಜಲ ಸಾಕ್ಷರತೆಯನ್ನುಂಟು ಮಾಡಲು ಎಲ್ಲರೂ ಶ್ರಮಿಸ ಬೇಕು. ಈಗಾಗಲೆ ಕಿಂಡಿಅಣೆಕಟ್ಟಗಳ ಮೂಲಕ ನೀರು ಮರುಪೂರಣದ ಕೆಲಸದ ಕಡೆ ಕ್ರಮ ಕೈಗೊಳ್ಳಲಾಗಿದೆ ಎಂದರು.

  ಜಿಲ್ಲಾ ಮಾಜಿ ಒಂಬುಡ್ಸ್‌ಮನ್ ಶೀನ ಶೆಟ್ಟಿ ಸ್ವಚ್ಚತಾ ಪ್ರಮಾಣ ವಚನ ಬೋಧಿಸಿದರು. ಜಿಲ್ಲೆಯಲ್ಲಿ ಜಲಸಾಕ್ಷರತೆ, ಕತತಿಲು ಮುಖತಿ ಮನೆ, ಎಂ. ನರೇಗಾ ಯೋಜನೆ ಇವುಗಳ ಅನುಷ್ಠಾನದ ಕುರಿತು ತಿಳಿ ಹೇಳಿದರು.

ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಕೃಷ್ಣಮೂಲ್ಯ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಸುಧಕರ ಕೆ. 2016-17ನೆ ಸಾಲಿನ ನವಸಾಕ್ಷರರ ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರದ ರೂಪರೇಷೆಗಳು, ತರಬೇತಿಯ ಹಂತಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಗಳು, ಗ್ರಾಮವಿಕಾಸ ಕೇಂದ್ರದ ಪ್ರೇರಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News