×
Ad

ಬಂಟ್ವಾಳ : ಜ್ಞಾನ ಸಂಗಮ (ಐಸಿಟಿ) ತರಬೇತಿ ಕೇಂದ್ರ ಉದ್ಘಾಟನೆ

Update: 2017-01-28 20:58 IST

ಬಂಟ್ವಾಳ, ಜ. 28: ಬದಲಾಗುತ್ತಿರುವ ಪ್ರಸಕ್ತ ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕತೆ ಮತ್ತು ಹೊಸ ತಂತ್ರಜ್ಞಾನ ಅಳವಡಿಕೆ ಮೂಲಕ ಶೈಕ್ಷಣಿಕ ಮತ್ತು ಜೀವನದಲ್ಲಿ ಕೌಶಲ್ಯ ವೃದ್ಧಿಗೆ ಸೂಕ್ತ ತರಬೇತಿ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ತಾಲೂಕಿನ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಆರಂಭಗೊಂಡ ಜ್ಞಾನ ಸಂಗಮ (ಐಸಿಟಿ) ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಇದರಿಂದಾಗಿ ಸ್ಪರ್ಧಾತ್ಮಕ ಸಮಾಜದಲ್ಲಿ ಉದ್ಯೋಗಾವಕಾಶ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಒಟ್ಟು ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ.ಸೈಯದ್ ಗೌಸ್, ರೂಸಾ ಸಂಯೋಜಕ ಪ್ರೊ.ಜಯರಾಮ, ಜ್ಞಾನ ಸಂಗಮ ಕಾರ್ಯಕ್ರಮ ಸಂಯೋಜಕಿ ಉಮಾ ಜಿ.ಸಾಲ್ಯಾನ್, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News