ಅಕ್ರಮ ಮರಳು ಸಾಗಾಟ: ಮೂರು ಲಾರಿಗಳು ವಶಕ್ಕೆ
ಮಂಗಳೂರು, ಜ. 28: ನದಿಯಿಂದ ಅಕ್ರಮ ಮರಳನ್ನು ತೆಗೆದು ಸಾಗಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮರಳು ತೆಗೆಯುತ್ತಿದ್ದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಹಿಂಬದಿಯ ನೇತ್ರಾವತಿ ನದಿ ತಟದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ದಾಳಿ ನಡೆಸಿ ಮೂರು ಲಾರಿ ಹಾಗೂ ಒಂದು ಜೆಸಿಬಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನೇತ್ರಾವತಿ ನದಿ ತಟದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸು ಆಯಕ್ತರು ಮಂಗಳೂರು ಗ್ರಾಮಾಂತರ ಠಾಣಾ ನಿರೀಕ್ಷಕರು ಹಾಗೂ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದ ವ್ಯಕ್ತಿಯೋರ್ವ ಪರಾರಿಯಾಗಿದ್ದು, ಸ್ಥಳದಲ್ಲಿದ್ದ ಮರಳು ತುಂಬಿಸಿ ಸಾಗಾಟಕ್ಕೆ ಯತ್ನಿಸುತ್ತಿದ್ದ ಮೂರು ಲಾರಿಗಳನ್ನು ಮತ್ತು ಮರಳುಗಾರಿಕೆಗೆ ಬಳಸಿದ್ದ ಜೆಸಿಬಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.