ಅಡ್ಯಾರ್ ಕಣ್ಣೂರು ಉರೂಸ್ ಕಾರ್ಯಕ್ರಮಕ್ಕೆ ಶಾಸಕ ಲೋಬೊ ಭೇಟಿ
Update: 2017-01-29 21:55 IST
ಮಂಗಳೂರು , ಜ.29 : ಅಡ್ಯಾರ್ ಕಣ್ಣೂರು ನಡುಪಲ್ಲಿಯಲ್ಲಿ ನಡೆಯುತ್ತಿರುವ ಉರೂಸ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಶಾಸಕ ಜೆ.ಆರ್.ಲೋಬೊ ಅವರು ರವಿವಾರ ಮಸೀದಿ ಮತ್ತು ಉರೂಸ್ ಕಾರ್ಯಕ್ರಮಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಂಗಳೂರು ತಾ.ಪಂ. ಅಧ್ಯಕ್ಷ ಮುಹಮ್ಮದ್ ಮೋನು, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಹಮೀದ್ ಕಣ್ಣೂರು, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್, ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಕಣ್ಣೂರು, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅದ್ರಾಂ ಹಾಜಿ ಹಾಗೂ ಲತೀಫ್ ಕಣ್ಣೂರು ಮುಂತಾದವರು ಉಪಸ್ಥಿತರಿದ್ದರು.