ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವು
Update: 2017-01-29 23:12 IST
ಮುಂಡಗೋಡ, ಜ.29: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕಿಮ್ಸ್‌ನಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ತಾಲೂಕಿನ ಮೈನಳ್ಳಿ ಗ್ರಾಮದ ಆನಂದಿಬಾಯಿ ಅಜರೆಕರ(58) ಎಂದು ಗುರುತಿಸಲಾಗಿದೆ.
ಇತ್ತೀಚೆಗೆ ಆನಂದಿಬಾಯಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಮೃತಪಟ್ಟಿದ್ದಾರೆ.
ಮೃತ ಮಹಿಳೆ ಮಾನಸಿಕ ಅಸ್ವಸ್ಥೆಯಾಗಿದ್ದಳು ಎಂದು ಹೇಳಲಾಗಿದೆ.
ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.