ಮಂಗಳೂರು : ವಿಮಾನದ ಶೌಚಾಲಯದಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನಾಭರಣ ಪತ್ತೆ

Update: 2017-01-30 15:33 GMT

ಮಂಗಳೂರು, ಜ.30: ಜೆಟ್ ಏರ್‌ವೇಸ್‌ಗೆ ಸೇರಿದ ವಿಮಾನದ ಶೌಚಾಲಯದೊಳಗೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಪತ್ತೆಯಾದ ಘಟನೆ ಸೋಮವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಕಿಗೆ ಬಂದಿದೆ.

ದುಬೈನಿಂದ ಮಂಗಳೂರಿಗೆ ಆಗಮಿಸಿದ ಜೆಟ್ ಏರ್‌ವೇಸ್ ವಿಮಾನದಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳಿವೆ ಎಂಬ ಖಚಿತ ಮಾಹಿತಿಯೊಂದಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ವಿಮಾನವನ್ನು ಪರಿಶೀಲಿಸಿದರು. ಈ ಸಂದರ್ಭ ಶೌಚಾಲಯದೊಳಗೆ ಅಡಗಿಸಿದ್ದ ಸುಮಾರು 29 ಲಕ್ಷ ರೂ ಮೌಲ್ಯದ 1,233 ಗ್ರಾಂ ಚಿನ್ನಾಭರಣಗಳು ಪತ್ತೆಯಾಗಿವೆ.

ಕಪ್ಪುಬಣ್ಣದ ಎರಡು ಪ್ಲಾಸ್ಟಿಕ್ ಕವರ್‌ನಲ್ಲಿ ಚಿನ್ನಾಭರಣ ತುಂಬಿಸಿ ಶೌಚಾಲಯದಲ್ಲಿ ಅಡಗಿಸಿಟ್ಟಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಲ್ಲಿ ನೆಕ್ಲೆಸ್, ಬ್ರಾಸ್‌ಲೆಟ್, ಸರ, ಕಿವಿಯೋಲೆ ಮಾದರಿಗಳ ರೂಪದ ಚಿನ್ನಾಭರಣಗಳು ಸೇರಿದೆ. ಅವುಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ನೋಟುಗಳ ನಿಷೇಧದ ಬಳಿಕ ಈ ರೀತಿಯ ಅಕ್ರಮ ಚಿನ್ನ ಸಾಗಾಟ ಪ್ರಕರಣ ಇದೇ ಮೊದಲ ಬಾರಿ ಬೆಳಕಿಗೆ ಬಂದಿದೆ ಎಂದು ಮಂಗಳೂರು ಕಸ್ಟಮ್ಸ್ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News