ಸುಬ್ರಾಯ ಚೊಕ್ಕಾಡಿಗೆ ನಿರಂಜನ ಪ್ರಶಸ್ತಿ
Update: 2017-01-30 23:39 IST
ಪುತ್ತೂರು, ಜ.30: ಇಲ್ಲಿನ ವಿವೇಕಾನಂದ ಕಾಲೇಜಿನ ಕನ್ನಡ ಸಂಘ ಹಾಗೂ ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನೀಡುವ 2016ನೆ ಸಾಲಿನ ‘ನಿರಂಜನ ಪ್ರಶಸ್ತಿ’ಗೆ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಜ.31ರಂದು ಪೂರ್ವಾಹ್ನ 11ಕ್ಕೆ ಕಾಲೇಜಿನಲ್ಲಿ ನಡೆಯಲಿದೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಕಾರ್ಯಾಧ್ಯಕ್ಷ ಡಾ.ತಾಳ್ತಜೆ ವಸಂತ ಕುಮಾರ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ರಾಧಾಕೃಷ್ಣ ಬೆಳ್ಳೂರು ಅಭಿನಂದನಾ ಭಾಷಣ ಮಾಡುವರು ಎಂದು ಪ್ರಕಟನೆ ತಿಳಿಸಿದೆ.