ಉಪ್ಪಳ: ಬಸ್-ಬೈಕ್ ಢಿಕ್ಕಿ; ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯ

Update: 2017-01-30 18:21 GMT

ಮಂಜೇಶ್ವರ, ಜ.30: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಶಾಲೆ ಬಳಿ ಬಸ್ ಹಾಗೂ ಬೈಕ್ ಗಳು ಪರಸ್ಪರ ಢಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ 1ರ ಸುಮಾರಿಗೆ ನಡೆದಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು ಇಚ್ಚಿಲಂಗೋಡಿನ ಮುಸೈರ್(19), ಮುಳ್ಳೇರಿಯಾದ ಯೂನುಸ್(19) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News