ಶ್ರೀಮಧ್ವಾಚಾರ್ಯ ಸಪ್ತ ಶತಮಾನೋತ್ಸವ ಉದ್ಘಾಟನೆ

Update: 2017-01-30 18:34 GMT

ಉಡುಪಿ, ಜ.30: ಪರ್ಯಾಯ ಪೇಜಾವರ ಮಠದ ಆಶ್ರಯದಲ್ಲಿ ಇಂದಿನಿಂದ ೆ.6ರವರೆಗೆ ನಡೆಯುವ ಜಗದ್ಗುರು ಶ್ರೀಮಧ್ವಾಚಾರ್ಯ ಸಪ್ತ ಶತಮಾನೋತ್ಸವ, 28ನೆ ಅಖಿಲ ಭಾರತ ಮಾಧ್ವ ತತ್ವಜ್ಞಾನ ಸಮ್ಮೇಳನದ ಉದ್ಘಾಟನೆಯು ಇಂದು ಶ್ರೀಕೃಷ್ಮ ಮಠದ ರಾಜಾಂಗಣದಲ್ಲಿ ನಡೆಯಿತು.

ಈ ಎಲ್ಲ ಕಾರ್ಯಕ್ರಮಗಳನ್ನು ದೀಪ ಬೆಳಗಿಸಿ, ಮಧ್ವಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾತನಾಡಿ, ಮಕ್ಕಳಿಗೆ ಚಿಕ್ಕಂದಿನಿಂದಲೇ ಸಂಸ್ಕೃತಿಯನ್ನು ಕಲಿಸುವ ಮೂಲಕ ಅದನ್ನು ಉಳಿಸಲು ಪ್ರಯತ್ನಿಸಬೇಕು ಎಂದರು.

ಪರ್ಯಾಯ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು. ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಬನ್ನಂಜೆ ಶ್ರೀರಾಘವೇಂದ್ರ ತೀರ್ಥ ಸ್ವಾಮೀಜಿ, ಜೆಡಿಎಸ್ ನಾಯಕ ಬಿ.ಎಂ.ಾರೂಕಿ, ಸ್ವಾಗತ ಸಮಿತಿಯ ರತ್ನಕುಮಾರ್ ಹಾಗೂ ಪ್ರದೀಪ್‌ಕುಮಾರ್ ಕಲ್ಕೂರ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಕಾರ್ಯದರ್ಶಿ ಬಾಲಾಜಿ ರಾಘವೇಂದ್ರ ಆಚಾರ್ಯ ಸ್ವಾಗತಿಸಿದರು. ವಾಸುದೇವ ಭಟ್ ಪೆರಂಪಳ್ಳಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News