ಅತ್ಯಾಚಾರ ಯತ್ನ : ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ
Update: 2017-01-31 23:07 IST
ಬೆಳ್ತಂಗಡಿ , ಜ.31 : ಮುಂಡಾಜೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಸಂಬಂಧಿಕನಾದ ಯುವಕನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗ ಯತ್ನಿಸಿದ ಘಟನೆ ನಡೆದಿದೆ.
ಆರೋಪಿ ಮುಂಡಾಜೆ ಗ್ರಾಮದ ನಿವಾಸಿ ಗುರುಪ್ರಸಾದ್(22) ಎಂಬಾತನನ್ನು ಧರ್ಮಸ್ಥಳ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಮನೆಯಲ್ಲಿ ಒಬ್ಬಳೇ ಇದ್ದವೇಳೆ ಮನೆಗೆ ಬಂದ ಆರೋಪಿ ಬಾಲಕಿಯ ಮೇಲೆ ಕೈಹಾಕಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ . ಆಕೆ ವಿರೋಧ ವ್ಯಕ್ತಪಡಿಸಿದಾಗ ಅಲ್ಲಿಂದ ಕಾಲ್ಕಿತ್ತಿದ್ದಾನೆ .
ಬಾಲಕಿ ಬಳಿಕ ಮನೆಯಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು ಇದನ್ನು ಗಮನಿಸಿದ ತಾಯಿ ಆಕೆಯನ್ನು ಕೂಡಲೇ ಆಸ್ಪತ್ರಗೆ ದಾಖಲಿಸಿದ್ದಾಳೆ . ಬಾಲಕಿಯ ತಾಯಿಯ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಿಸಲಾಗಿದೆ.