ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಾರ್ ಸ್ಫೋಟ; ಕನಿಷ್ಠ 3 ಸಾವು
Update: 2017-01-31 23:51 IST
ಚಂಡೀಗಢ,ಜ.31: ಪಂಜಾಬ್‌ನ ಭಟಿಂಡಾ ಸಮೀಪದ ಮಯೂರ್‌ಮಂಡಿಯಲ್ಲ್ಲಿ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾರೊಂದು ಸ್ಫೋಟಿಸಿ ಕನಿಷ್ಛ 3 ಮಂದಿ ಮೃತಪಟ್ಟಿದ್ದಾರೆ ಹಾಗೂ 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಹರ್ಮಿಂದರ್ ಜಸ್ಸಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾರ್ ಸ್ಫೋಟಿಸಿತೆಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಿಗೆ ಮಯೂರ್ ಮಂಡಿ ಹಾಗೂ ಭಟಿಂಡಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಇದೊಂದು ವಿಧ್ವಂಸಕ ಕೃತ್ಯವಾಗಿರುವ ಸಾಧ್ಯತೆಯನ್ನು ತಳ್ಳಿಹಾಕಲಾಗದೆಂದು ಪೊಲೀಸ್ ಮೂಲಗಳು ತಿಳಿಸಿವೆ.ಪಂಜಾಬ್ ವಿಧಾನಸಭಾ ಚುನಾವಣೆಗೆೆ ಫೆಬ್ರವರಿ 4ರಂದು ಮತದಾನ ನಡೆಯಲಿದೆ.