×
Ad

ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಆಯ್ಕೆ

Update: 2017-01-31 23:53 IST

ಉಡುಪಿ, ಜ.31: ರಾಜ್ಯ ಸರಕಾರದ ಪಶುಭಾಗ್ಯ ಯೋಜನೆಯ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಅಕ್ಬರಲಿ ಮುಕ್ಕ ಆಯ್ಕೆಯಾಗಿದ್ದಾರೆ.

ಶಾಸಕ ಮೊಯ್ದಿನ್ ಬಾವಾ ಶಿಫಾರಸಿನ ಮೇರೆಗೆ ಸರಕಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಅಕ್ಬರಲಿ ಸುರತ್ಕಲ್ ಪುರಸಭೆ ಕೌನ್ಸಿಲರ್ ಆಗಿ, ಮುಕ್ಕ ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ, ಮುಕ್ಕ ವಲಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಮುಕ್ಕ ನಸ್ರತುಲ್ ಮಸಾಕಿನ್ ಅಸೋಸಿಯೇಶನ್‌ನ ಅಧ್ಯಕ್ಷರಾಗಿ, ಮುಕ್ಕ ಜುಮಾ ಮಸೀದಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News