ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Update: 2017-02-01 11:05 IST
ಹೊಸದಿಲ್ಲಿ, ಫೆ.1: ಹಿರಿಯ ಸಂಸದ ಇ. ಅಹ್ಮದ್ ನಿಧನದ ಹಿನ್ನಲೆಯಲ್ಲಿ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕೆಂದು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಆಗ್ರಹದ ನಡುವೆ ಬುಧವಾರ ಬೆಳಗ್ಗೆ ಇಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದೆ.
ಕೇಂದ್ರ ಬಜೆಟ್ ಲೋಕಸಭೆಯಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ವಿತ್ತ ಸಚಿವ ಅರುಣ್ ಜೇಟ್ಲಿ ಬಜೆಟ್ ಮಂಡಿಸಲಿದ್ದಾರೆ.