ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಮುಲ್ಕಿಯಲ್ಲಿ ಸಾರ್ವಜನಿಕ ಸಭೆ
Update: 2017-02-01 23:46 IST
ಮಂಗಳೂರು , ಫೆ. 1 : ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ಶಾಖೆಯ ವತಿಯಿಂದ ಫೆಬ್ರವರಿ 3ರಂದು ಮುಲ್ಕಿಯ ಕಾರ್ನಾಡ್ ನಲ್ಲಿರುವ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಮಗ್ರಿಬ್ ನಮಾಝಿನ ಬಳಿಕ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಭಾಷಣಕಾರರಾಗಿ ಬೋಳಂಗಡಿ ಹವ್ವಾ ಜುಮಾ ಮಸೀದಿಯ ಖತೀಬರಾದ ಮೌಲಾನ ಯಹ್ಯಾ ತಂಙಳ್ ಮದನಿ `ಸಮುದಾಯದ ಐಕ್ಯ' ಹಾಗೂ ಜಮಾಅತೆ ಇಸ್ಲಾಮೀ ಹಿಂದ್, ಮಂಗಳೂರು ಅಧ್ಯಕ್ಷರಾದ ಮುಹಮ್ಮದ್ ಕುಂಞಿಯವರು `ಉತ್ತಮ ಸಮುದಾಯ' ಎಂಬ ವಿಷಯದಲ್ಲಿ ಮಾತನಾಡಲಿದ್ದಾರೆ.
ಸ್ತ್ರೀಯರಿಗೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.