ನಿಚ್ಚಲಮಕ್ಕಿ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ
Update: 2017-02-03 15:01 IST
ಭಟ್ಕಳ, ಫೆ.3: ನಿಚ್ಛಲಮಕ್ಕಿ ವೆಂಕಟ್ರಮಣ ದೇವಸ್ಥಾನ ಆಸರಕೇರಿಯ ನೂತನ ಶಿಲಾಮಯ ಕಟ್ಟಡದಲ್ಲಿ ದೇವರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮದ 6ನೆ ದಿನವಾದ ಗುರುವಾರ ದೇವರ ಸನ್ನಿಧಿಯಲ್ಲಿ ವಿಜೃಂಭಣೆಯ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಿತು.
ಉಜಿರೆಯ ರಾಮ ಕ್ಷೇತ್ರದ ಶ್ರೀ ಬೃಹ್ಮಾನಂದ ಸರಸ್ವತೀ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿ ಸಮಾಜ ಬಾಂಧವರು ಉಪಸ್ಥಿತರಿದ್ದರು. ದೇವಸ್ಥಾನದಿಂದ ದೇವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ತಂದು ಸಹಸ್ರಾರು ಭಕ್ತರ ಜಯಘೋಷದೊಂದಿಗೆ ವಿಜೃಭಣೆಯಿಂದ ವೇದಿಕೆಯಲ್ಲಿ ಪ್ರತಿಷ್ಠಾಪಿಸಲಾಯಿತು. ಹತ್ತಾರು ವೈದಿಕರ ಮೇಲ್ವಿಚಾರಣೆಯಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಕ್ತರು ಸಾಕ್ಷಿಯಾದರು. ವಿಶೇಷವಾಗಿ ಹರಿಸೇವಾ ಕುಣಿತ ನಡೆಯಿತು.