ಅಪಘಾತ: ಗಾಯಾಳು ಮೃತ್ಯು
Update: 2017-02-04 00:27 IST
ಉಪ್ಪಿನಂಗಡಿ, ೆ.3: ಕಂಟೈನರ್ ಮಿನಿ ಲಾರಿಯೊಂದು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರರೊಬ್ಬರು ಚಿಕಿತ್ಸೆ ಲ ಕಾರಿಯಾಗದೆ ಗುರುವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾಮದ ಅಳಿಕೆಯ ಅಣ್ಣಿ ಪೂಜಾರಿ(38) ಮೃತಪಟ್ಟವರು.
ಗುರುವಾರ ಮಧ್ಯಾಹ್ನ ಅಣ್ಣಿ ಪೂಜಾರಿ ಬೈಕ್‌ನಲ್ಲಿ ಉಪ್ಪಿನಂಗಡಿ ಕಡೆಯಿಂದ ಮಾಣಿಗೆ ತೆರಳುತ್ತಿದ್ದ ಸಂದಭರ್ ಗಡಿಯಾರ ಎಂಬಲ್ಲಿ ಮಂಗಳೂರು ಕಡೆಯಿಂದ ಅತೀ ವೇಗದಿಂದ ಬಂದ ಐಸ್‌ಕ್ರೀಂ ಸಾಗಾಟದ ಕಂಟೈನರ್ ಮಿನಿ ಲಾರಿ ಇವರ ಬೈಕ್‌ಗೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅಣ್ಣಿ ಪೂಜಾರಿಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಲ ಕಾರಿಯಾಗದೆ ಮೃತಪಟ್ಟಿದ್ದಾರೆ. ಪುತ್ತೂರು ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.