ಕೃಷ್ಣ ಬಿಜೆಪಿ ಸೇರ್ಪಡೆ ಖಚಿತ: ಯಡಿಯೂರಪ್ಪ
Update: 2017-02-04 10:34 IST
ಕಲಬುರಗಿ, ಫೆ.4: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಬಿಜೆಪಿ ಸೇರ್ಪಡೆ ಖಚಿತ ಎಂದು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
‘‘ಪ್ರಧಾನಮಂತ್ರಿ ನರೇಂದ್ರ ಮೋದಿ ಮೇಲಿನ ಗೌರವದಿಂದ ಕೃಷ್ಣ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ. ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಮತ್ತೊಮ್ಮೆ ಮಾತುಕತೆ ನಡೆಸಲಾಗುವುದು. ಅವರು ಪಕ್ಷ ಸೇರ್ಪಡೆಗೆ ಯಾವುದೇ ಷರತ್ತು ವಿಧಿಸಿಲ್ಲ’’ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಹಲವು ವರ್ಷಗಳ ಕಾಲ ಹಲವು ಹುದ್ದೆಗಳಲ್ಲಿ ಅಧಿಕಾರ ಅನುಭವಿಸಿದ್ದ ಕೃಷ್ಣ ರಾಜಕೀಯ ಸಂಧ್ಯಾಕಾಲದಲ್ಲಿ ದಿಢೀರನೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಅವರು ಬೇರೆ ಪಕ್ಷ ಸೇರುತ್ತಾರೆಂಬ ಊಹಾಪೋಹ ವಿದ್ದು, ಇದೀಗ ಅವರು ಬಿಜೆಪಿ ಸೇರ್ಪಡೆಯಾಗುತ್ತಾರೆಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.