×
Ad

ಸ್ಕೌಟ್ಸ್-ಗೈಡ್ಸ್ ಮಕ್ಕಳಿಗೆ ಕರ್ನಾಟಕ-ಭಾರತ ದರ್ಶನ: ಸಿಂಧ್ಯಾ

Update: 2017-02-04 18:40 IST

ಮಂಗಳೂರು, ಫೆ.4: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸ್ಕೌಟ್ಸ್ ಮತ್ತು ಗೈಡ್ಸ್‌ನ 10 ಸಾವಿರ ವಿದ್ಯಾರ್ಥಿ ಗಳಿಗೆ ‘ಕರ್ನಾಟಕ ದರ್ಶನ’ ಪ್ರವಾಸಕ್ಕೆ ಅವಕಾಶ ಮಾಡಿ ಕೊಡಲಾಗುವುದು. ಇದಕ್ಕೆ ತೃತೀಯ ಸೋಪಾನ ಹಂತ ದಲ್ಲಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮುಂದಿನ ವರ್ಷ ದಿಂದ ರಾಷ್ಟ್ರಪತಿ ಪದಕ ಅರ್ಹತಾ ಸಾಲಿ ನಲ್ಲಿರುವ ವಿದ್ಯಾರ್ಥಿಗಳಿಗೆ ‘ಭಾರತ ದರ್ಶನ’ಕ್ಕೆ ಅವಕಾಶ ನೀಡುವಂತೆ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆಯಿಂದ ನಗರದ ಸ್ಕೌಟ್ಸ್ ಭವನದಲ್ಲಿ ಶನಿವಾರ ನಡೆದ ‘ಜಿಲ್ಲಾ ಮಟ್ಟದ ಸ್ಕೌಟರ್ಸ್‌-ಗೈಡರ್ಸ್‌ ಸಮಾವೇಶ’ದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್‌ನಲ್ಲಿ ರಾಜ್ಯಮಟ್ಟದ ಜಂಬೂರಿ ನಡೆಯಲಿದೆ. ರಾಜ್ಯದ ಹೆಚ್ಚಿನ ಶಾಲೆಗಳಿಗೆ ಸ್ಕೌಟ್ಸ್ -ಗೈಡ್ ವಿಸ್ತರಿಸಬೇಕು. ತಜ್ಞರ ಮಾರ್ಗ ದರ್ಶನದೊಂದಿಗೆ ಸ್ಕೌಟ್ಸ್-ಗೈಡ್ಸ್‌ಗೆ ಸಂಬಂಧಿಸಿದ ಸಾಂಸ್ಕೃತಿಕ, ಅಧ್ಯಯನ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

 ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ ಮಾತನಾಡಿ, ಸಮಾಜ ಸೇವೆಯ ಬಗ್ಗೆ ವೇದಿಕೆಗಳಲ್ಲಿ ಮಾತನಾ ಡುವುದು ಸುಲಭ. ಆದರೆ ಅಳವಡಿ ಸುವುದು ಕಷ್ಟ. ಈ ನಿಟ್ಟಿನಲ್ಲಿ ಸ್ಕೌಟ್ಸ್ -ಗೈಡ್ಸ್ ಸಂಘಟನೆ ಮಾದರಿಯಾಗಿ ಬೆಳೆದಿದೆ ಎಂದರು.

ಈ ಸಂದರ್ಭ ನಿವೃತ್ತ ಶಿಕ್ಷಕರಿಗೆ ಸನ್ಮಾನ, ಪದಕ ಪ್ರದಾನ ಮಾಡಲಾಯಿತು. ಜಿಲ್ಲಾ ಮುಖ್ಯ ಆಯುಕ್ತ ಎನ್.ಜಿ.ಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕರ್ಣಾಟಕ ಬ್ಯಾಂಕ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀನಿವಾಸ ದೇಶಪಾಂಡೆ, ಸ್ಕೌಟ್ಸ್ ಜಿಲ್ಲಾ ಆಯುಕ್ತ ರಾಮಶೇಷ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾರ್ ಕದ್ರಿ, ಗೈಡ್ ಜಿಲ್ಲಾ ಆಯುಕ್ತ ಐರಿನ್ ಡಿಕುನ್ಹ, ಜಿಲ್ಲಾ ಕೋಶಾಧಿಕಾರಿ ವಾಸುದೇವ ಬೋಳೂರು, ಜಿಲ್ಲಾ ಉಪಾಧ್ಯಕ್ಷ ವಸಂತ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News