×
Ad

ಕಾಶ್ಮೀರ: ಇಬ್ಬರು ಉಗ್ರರ ಹತ್ಯೆ

Update: 2017-02-04 22:46 IST

ಶ್ರೀನಗರ,ಫೆ.4: ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರಗಾಮಿಗಳು, ಭದ್ರತಾಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಅಮರಘರ್‌ನಲ್ಲಿ ಉಗ್ರರು ಅಡಗಿಕೊಂಡಿದ್ದಾರೆಂಬ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದರು. ಆ ಸಂದರ್ಭದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹತ್ಯೆಗೈದಿವೆಯೆಂದು ಮೂಲಗಳು ತಿಳಿಸಿವೆ.

 ಕಾರ್ಯಾಚರಣೆಯಲ್ಲಿ ಓರ್ವ ಸಬ್ ಇನ್ಸ್‌ಪೆಕ್ಟರ್ ಹಾಗೂ ಇನ್ನೋರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮೃತ ಉಗ್ರರಿಂದ ಎಕೆ ರೈಫಲ್ ಹಾಗೂ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆಯೆಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News