ಮರಕ್ಕೆ ಲಾರಿ ಢಿಕ್ಕಿ: ಓರ್ವ ಮೃತ್ಯು
Update: 2017-02-05 22:04 IST
ಶಂಕರನಾರಾಯಣ, ಫೆ.5: ಸಿದ್ದಾಪುರ ಗ್ರಾಮದ ಅತ್ತಿಕೊಡ್ಲು ಕ್ರಾಸ್ ಎಂಬಲ್ಲಿ ಫೆ.4ರಂದು ಸಂಜೆ ವೇಳೆ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬ ಹಾಗೂ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಚಂದ್ರ ಎಂದು ಗುರುತಿಸಲಾಗಿದೆ. ಹೆನ್ನಾಬೈಲ್ನಿಂದ ಸಿದ್ದಾಪುರ ಕಡೆಗೆ ಹೋಗುತ್ತಿದ್ದ ಲಾರಿಯು ಚಾಲಕ ಮಹಮ್ಮದ್ ಗೌಸ್ ಎಂಬವರ ನಿಯಂತ್ರಣ ತಪ್ಪಿರಸ್ತೆಯಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ದೊಡ್ಡ ಹಲಸಿನ ಮರಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಲಾರಿಯ ಎದುರಿನ ಸೀಟಿನಲ್ಲಿ ಕುಳಿತಿದ್ದ ಚಂದ್ರ ಗಂಭೀರವಾಗಿ ಗಾಯಗೊಂಡರು. ಇವರು ರಾತ್ರಿ 8.30ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.