×
Ad

ಜಲ್ಲಿಕಟ್ಟು: 37 ಮಂದಿಗೆ ಗಾಯ

Update: 2017-02-05 23:40 IST

ಮಧುರೈ, ಫೆ.5: ಮಧುರೈ ಜಿಲ್ಲೆಯ ಅವನೀಪುರಂ ಎಂಬಲ್ಲಿ ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 37 ಮಂದಿ ಗಾಯಗೊಂಡ ಘಟನೆ ನಡೆದಿದೆ. 950 ಹೋರಿಗಳು ಮತ್ತು 1,200 ಹೋರಿ ಪಳಗಿಸುವವರು ಪಾಲ್ಗೊಂಡಿದ್ದ ಈ ಕಾರ್ಯಕ್ರಮಕ್ಕೆ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಪ್ರೇಕ್ಷಕರು ಪಾಲ್ಗೊಂಡಿದ್ದರು. ಗಾಯಗೊಂಡವರಲ್ಲಿ 9 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಉಳಿದವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News