ತಮಿಳುನಾಡು ಸಿಎಂ ಪನ್ನೀರ್'ಸೆಲ್ವಂ ರಾಜೀನಾಮೆ ಅಂಗೀಕಾರ
Update: 2017-02-06 15:13 IST
ಚೆನ್ನೈ, ಫೆ.6: ತಮಿಳುನಾಡು ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ಒ. ಪನ್ನೀರ್ ಸೆಲ್ವಂ ಅವರು ಸಲ್ಲಿಸಿರುವ ರಾಜೀನಾಮೆಯನ್ನು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸೋಮವಾರ ಅಂಗೀಕರಿಸಿದ್ದಾರೆ.
ಎಐಎಡಿಎಂಕೆ ಶಾಸಕಾಂಗ ಪಕ್ಷದ ಮುಖ್ಯಸ್ಥರಾಗಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಸ್ನೇಹಿತೆ ವಿ.ಕೆ. ಶಶಿಕಲಾ ನಟರಾಜನ್ ಅವರು ರವಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿದ್ದರು. ಆ ಬಳಿಕ ಪನ್ನೀರ್ ಸೆಲ್ವಂ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು.
ಇಂದು ರಾಜೀನಾಮೆಯನ್ನು ಅಂಗೀಕರಿಸಿರುವ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಪರ್ಯಾಯ ವ್ಯವಸ್ಥೆ ಆಗುವವರೆಗೂ ಮುಖ್ಯ ಮಂತ್ರಿ ಹುದ್ದೆಯಲ್ಲಿ ಮುಂದುವರೆಯುವಂತೆ ಪನ್ನೀರ್ ಸೆಲ್ವಂಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ