×
Ad

ನಾಳೆ ಬೆಳಗ್ಗೆ 9 ಕ್ಕೆ ತಮಿಳುನಾಡು ನಿಯೋಜಿತ ಸಿಎಂ ಚಿನ್ನಮ್ಮ ಪ್ರಮಾಣ ?

Update: 2017-02-06 17:21 IST

ಚೆನ್ನೈ, ಫೆ.6: ತಮಿಳುನಾಡಿನ ನೂತನ ಮುಖ್ಯ ಮಂತ್ರಿಯಾಗಿ ಎಐಎಡಿಎಂಕೆ ಅಧಿನಾಯಕಿ ಶಶಿಕಲಾ ನಟರಾಜನ್‌ ಮಂಗಳವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಮದ್ರಾಸ್‌ ವಿವಿ ಶತಮಾನೋತ್ಸವ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನಿಯೋಜಿತ ಸಿಎಂ ಶಶಿಕಲಾ ಅವರು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಹಿಂದೆ ಮಾಜಿ ಮುಖ್ಯ ಮಂತ್ರಿ ದಿವಂಗತ ಜಯಲಲಿತಾ ಪ್ರಮಾಣ ವಚನ ಸ್ವೀಕರಿಸಿದ ಜಾಗದಲ್ಲೇ ಶಶಿಕಲಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆಂದು ತಿಳಿದು ಬಂದಿದೆ.
ಎಐಎಡಿಎಂಕೆ ಶಾಸಕಾಂಗ ಪಕ್ಷದ ಮುಖ್ಯಸ್ಥರಾಗಿ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತ ಸ್ನೇಹಿತೆ ವಿ.ಕೆ. ಶಶಿಕಲಾ ನಟರಾಜನ್ ಅವರು ರವಿವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಆಯ್ಕೆಯಾಗಿದ್ದರು. ಆ ಬಳಿಕ  ಪನ್ನೀರ್ ಸೆಲ್ವಂ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ  ಸಲ್ಲಿಸಿದ್ದರು. ಇಂದು ರಾಜ್ಯಪಾಲ ವಿದ್ಯಾ ಸಾಗರ್ ರಾವ್ ರಾಜೀನಾಮೆಯನ್ನು ಅಂಗೀಕರಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News