ನಾಳೆ ಚಿನ್ನಮ್ಮ ಸಿಎಂ ಆಗಿ ಪ್ರಮಾಣ ಸ್ವೀಕಾರ ಇಲ್ಲ
Update: 2017-02-06 22:37 IST
ಚೆನ್ನೈ, ಫೆ.6:ರಾಜ್ಯಪಾಲರು ಚೆನ್ನೈಗೆ ಆಗಮಿಸದಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ನಿಯೋಜಿತ ಮುಖ್ಯ ಮಂತ್ರಿ ಶಶಿಕಲಾ ನಟರಾಜನ್ ಅವರು ಮಂಗಳವಾರ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇಲ್ಲ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಪ್ರಮಾಣನಚನ ಸ್ವೀಕರಿಸಲು ಸಿದ್ಧತೆ ನಡೆಸಿದ್ದ ಶಶಿಕಲಾ ನಟರಾಜನ್ ಅವರಿಗೆ ರಾಜ್ಯಪಾಲರು ಇನ್ನೂ ಪ್ರಮಾಣವಚನಕ್ಕೆ ಗ್ರೀನ್ ಸಿಗ್ನಲ್ ನೀಡಿಲ್ಲ. ಇನ್ನೂ ಉಸ್ತುವಾರಿ ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್ ಚೆನ್ನೈಗೆ ಆಗಮಿಸಿಲ್ಲ. ಈ ಕಾರಣದಿಂದಾಗಿ ಸಮಸ್ಯೆ ಉಂಟಾಗಿದೆ.