ಫೆ.10: ಕುಂದಾಪುರ ‘ಭಾರತ ಭಾಗ್ಯ ವಿಧಾತಾ’
Update: 2017-02-06 23:59 IST
ಉಡುಪಿ, ಫೆ.6: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರ 125ನೆ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ ಧ್ವನಿ ಬೆಳಕು ಕಾರ್ಯಕ್ರಮ ‘ಭಾರತ ಭಾಗ್ಯ ವಿಧಾತಾ’ ೆ.10ರಂದು ಸಂಜೆ 6:30ಕ್ಕೆ ಕುಂದಾಪುರದ ಗಾಂ ಮೈದಾನದಲ್ಲಿ ನಡೆಯಲಿದೆ.
ಪ್ರತಿಭೆ, ಪರಿಶ್ರಮಗಳಿಂದ ಜಗತ್ತಿನ ಪ್ರತಿಷ್ಠಿತ ವಿವಿಗಳ ಪದವಿ ಪುರಸ್ಕಾರ ಗಳಿಸಿದ ಆರ್ಥಿಕ ತಜ್ಞನ ಯಶೋಗಾಥೆಯನ್ನು ಧ್ವನಿ ಮತ್ತು ಬೆಳಕಿನ ವೈಭವದಲ್ಲಿ ರೂಪಿಸುವ ಕಾರ್ಯಕ್ರಮ ಇದಾಗಿದ್ದು, ಸುಮಾರು 80 ಕಲಾವಿದರಿಂದ 15 ದಿನಗಳ ಕಾಲ ರಾಜ್ಯದ ಪ್ರತೀ ಜಿಲ್ಲಾ ಕೇಂದ್ರಗಳಲ್ಲಿ ಪ್ರದರ್ಶನ ನಡೆಯಲಿದೆ ಎಂದು ಜಿಲ್ಲಾ ವಾರ್ತಾಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.