×
Ad

ಕಳಲೆ ಕೇಶವ ಮೂರ್ತಿ ಕಾಂಗ್ರೆಸ್ ಸೇರಲು ನಿರ್ಧಾರ

Update: 2017-02-07 15:04 IST

ಬೆಂಗಳೂರು, ಫೆ.7: ಜೆಡಿಎಸ್ ಮುಖಂಡ ಕಳಲೆ ಕೇಶವ ಮೂರ್ತಿ ಅವರು ಕಾಂಗ್ರೆಸ್ ಸೇರಲಿದ್ದಾರೆ.
ನಂಜನಗೂಡು ಪಟ್ಟಣದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯ ಬಳಿಕ  ಕಳಲೆ ಕೇಶವ ಮೂರ್ತಿ ಕಾಂಗ್ರೆಸ್ ಸೇರುವ ನಿರ್ಧಾರ ಪ್ರಕಟಿಸಿದರು.
ಕಳೆದ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಕಳಲೆ ಕೇಶವ ಮೂರ್ತಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಶ್ರೀನಿವಾಸ್ ಪ್ರಸಾದ್‌ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದರು. 

2013ರಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ನಂಜನಗೂಡು ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ  ವಿ.ಶ್ರೀನಿವಾಸ್ ಪ್ರಸಾದ್ 50,784 ಮತಗಳನ್ನು ಪಡೆದಿದ್ದರು. ಜೆಡಿಎಸ್ ನ ಕಳಲೆ ಎನ್. ಕೇಶವಮೂರ್ತಿ 41,843 ಮತಗಳನ್ನು ಪಡೆದು 8941 ಮತಗಳ ಅಂತರದಿಂದ ಸೋತಿದ್ದರು. ಇದೀಗ ಶ್ರೀನಿವಾಸ್ ಪ್ರಸಾದ್ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಅವರಿಗೆ ಎದುರಾಳಿಯಾಗಿ ಕಳಲೆ ಕೇಶವಮೂರ್ತಿ ಕಣಕ್ಕಿಳಿಯುವುದು ಖಚಿತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News