ಹಾರ್ದಿಕ್ ಪಟೇಲ್ ಈ ಬಿಜೆಪಿ ಮೈತ್ರಿ ಪಕ್ಷದ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ !

Update: 2017-02-07 12:41 GMT

ಹೊಸದಿಲ್ಲಿ, ಫೆ.7: ಗುಜರಾತ್‌ನಲ್ಲಿ ಪಟೇಲ್ ಸಮುದಾಯದವರಿಗೆ ಮೀಸಲಾತಿಗಾಗಿ ಹೋರಾಡುತ್ತಿರುವ ‘ಪಟಿದಾರ್ ’ ಆಂದೋಲನದ ಮುಖಂಡ ಹಾರ್ದಿಕ್ ಪಟೇಲ್ ಅವರನ್ನು ಬಿಜೆಪಿ ಮೈತ್ರಿಕೂಟದ ಗುಜರಾತ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.

     ಗುಜರಾತ್ ವಿಧಾನಸಭೆಯ 182 ಸ್ಥಾನಗಳಿಗಾಗಿ ಈ ವರ್ಷಾಂತ್ಯ ಚುನಾವಣೆ ನಡೆಯಲಿದ್ದು ಪ್ರಸ್ತುತ ಅಧಿಕಾರದಲ್ಲಿರುವ ಬಿಜೆಪಿ ಆಡಳಿತ ವಿರೋಧಿ ಅಲೆಯ ಬಗ್ಗೆ ತಲೆಕೆಡಿಸಿಕೊಂಡಿದೆ. ಮಹಾರಾಷ್ಟ್ರ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಿದ್ದ ಶಿವಸೇನೆ, ಗುಜರಾತ್ ಚುನಾವಣೆಯಲ್ಲಿ ಹಾರ್ದಿಕ್ ಪಟೇಲ್‌ರನ್ನು ಮುಂದಿಟ್ಟುಕೊಂಡು ಚುನಾವಣಾ ಕಣಕ್ಕೆ ಇಳಿಯಲು ನಿರ್ಧರಿಸಿದೆ. ಹಾರ್ದಿಕ್ ಪಟೇಲ್ ಜೈಲಿನಿಂದ ಬಿಡುಗಡೆಗೊಂಡ ಬಳಿಕ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ ಕೇಜ್ರೀವಾಲ್‌ಗೆ ಬೆಂಬಲ ಸೂಚಿಸಿರುವುದು ಇಲ್ಲಿ ಗಮನಾರ್ಹವಾಗಿದೆ. ಅಲ್ಲದೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್‌ರನ್ನು ಪಾಟ್ನಾದಲ್ಲಿ ಭೇಟಿಯಾಗಿದ್ದ ಪಟೇಲ್, ನಿತೀಶ್ 2019 ಮುಖಂಡ ಎಂದು ಕೊಂಡಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News