ಫೆ.11 ರಂದು ಭಾರತ ರತ್ನ ಸಿ.ಎನ್.ಆರ್. ರಾವ್ ಗೆ ಡಾಕ್ಟರ್ ಆಫ್ ಸೈನ್ಸ್ ಗೌರವ

Update: 2017-02-07 15:31 GMT

ಮಂಗಳೂರು.ಫೆ.7: ದೇರಳಕಟ್ಟೆಯ ಯೆನೆಪೋಯ ವಿಶ್ವ ವಿದ್ಯಾನಿಲಯದ ಆವರಣದಲ್ಲಿ  ಫೆ.11ರಂದು ನಡೆಯಲಿರುವ ಸಮಾರಂಭದಲ್ಲಿ ಭಾರತ ರತ್ನ ಪ್ರೊ.ಸಿ.ಎನ್.ರಾವ್ ಅವರಿಗೆ 'ಡಾಕ್ಟರ್ ಆಫ್ ಸೈನ್ಸ್' ಗೌರವ ಪದವಿ ನೀಡಿ ಗೌರವಿಸಲಾಗುವುದು. ಅಲ್ಲದೆ, ಅದೇ ದಿನ ಅವರು ಯೆನೆಪೋಯ ಪ್ರತಿಷ್ಠಾನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಯೆನೆಪೋಯ ನಾರ್ಕೊಟಿಕ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾ ವೆಬ್ ಸೈಟ್ ಮತ್ತು ಲೋಗೋವನ್ನು ಪ್ರೊ.ಸಿ.ಎನ್.ಆರ್.ರಾವ್ ಅನಾವರಣ ಗೊಳಿಸಲಿದ್ದಾರೆ. ಯೆನೆಪೋಯ ವಿಶ್ವ ವಿದ್ಯಾನಿಲಯದ ಕುಲಪತಿ ಯೆನೆಪೋಯ ಅಬ್ದುಲ್ಲಾ ಕುಂಞ ಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಡಾ.ಇಂದುಮತಿ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News