×
Ad

ತೆಂಕನಿಡಿಯೂರು ಕಾಲೇಜಿನಲ್ಲಿ ರಕ್ತದಾನ ಶಿಬಿರ

Update: 2017-02-07 22:29 IST

ಉಡುಪಿ, ಫೆ.7: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಉಡುಪಿ ಜಿಲ್ಲಾಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಕಾಲೇಜಿನಲ್ಲಿ ಏರ್ಪಡಿಸ ಲಾಗಿತ್ತು.

ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರೋಹಿಣಿ ಉದ್ಘಾಟಿಸಿದರು. ಜಿಲ್ಲಾಸ್ಪತ್ರೆ ಬ್ಲಡ್ ಬ್ಯಾಂಕ್‌ನ ವೈದ್ಯಾಧಿಕಾರಿ ಡಾ.ವೀಣಾ ರಕ್ತದಾನದ ಮಹತ್ವವನ್ನು ಕುರಿತು ಮಾತನಾಡಿ ದರು. ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್.ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

  ಎನ್ನೆಸ್ಸೆಸ್ ಯೋಜನಾಧಿಕಾರಿಗಳಾದ ರವಿರಾಜ್ ಎಸ್., ಮಂಜುನಾಥ, ರೆಡ್‌ಕ್ರಾಸ್ ಘಟಕದ ಸಂಯೋಜಕ ಬಸವರಾಜ್ ಯು. ಉಪಸ್ಥಿತರಿದ್ದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಡಾ.ಚಿದಾನಂದ ಸಂಜು ಸ್ವಾಗತಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ಮಂಜುನಾಥ ವಂದಿಸಿದರು. ಮಹಾ ಬಲೇಶ್ವರ್ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ 85ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News