ಮಂಗಳಮುಖಿಯರಿಗೆ ಕಿರುಕುಳ: ರಕ್ಷಣೆ ನೀಡಲು ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ಆಗ್ರಹ

Update: 2017-02-07 18:39 GMT

ಮಂಗಳೂರು, ೆ.7: ಸ್ವಾಭಿಮಾನಿಗಳಾಗಿ ಹಾಗೂ ಸಮಾಜದ ಮುಖ್ಯವಾಹಿನಿಯಲ್ಲಿ ಸಭ್ಯ ನಾಗರಿಕರಾಗಿ ಬದುಕಲು ಪ್ರಯತ್ನಿಸುತ್ತಿರುವ ಮಂಗಳಮುಖಿಯರಿಗೆ ಕೆಲವೊಂದು ಮಂದಿ ಕಿರುಕುಳ ನೀಡುವುದರೊಂದಿಗೆ ಬಲವಂತವಾಗಿ ಲೈಂಗಿಕ ಕಾರ್ಯಕರ್ತೆಯರನ್ನಾಗಿ ಅಥವಾ ಭಿಕ್ಷೆ ಬೇಡುವಂತೆ ಮಾಡುತ್ತಿದ್ದಾರೆ ಎಂದು ಪರಿವರ್ತನಾ ಚಾರಿಟೇಬಲ್ ಟ್ರಸ್ಟ್‌ನ ಉಪಾಧ್ಯಕ್ಷೆ ಚಂದ್ರಕಲಾ ಆರೋಪಿಸಿದ್ದಾರೆ.

ಮಂಗಳವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳಮುಖಿಯರಾಗಿ ಯಾವುದೇ ರೀತಿಯ ಆಸರೆ ಇಲ್ಲದೆ ಬದುಕುತ್ತಿದ್ದ ನಮ್ಮನ್ನು ವಾಯ್ಲೆಟ್ ಪಿರೇರಾ ಮುಖ್ಯ ವಾಹಿನಿಗೆ ತರಲು ಪ್ರಯತ್ನಿಸಿದ್ದಾರೆ. ಉದ್ಯೋಗ ಮಾಡಿ ಸ್ವಾಭಿಮಾನದೊಂದಿಗೆ ಬದುಕುವ ಆಸೆಯನ್ನು ಹೊಂದಿದ್ದ ನಮಗೆ ಕೆಲವು ಮಂಗಳಮುಖಿ ನಾಯಕಿಯರು ಒತ್ತಾಯಪೂರ್ವಕವಾಗಿ ಲೈಂಗಿಕ ಕಾರ್ಯಕರ್ತೆಯರಾಗಿ ಕೆಲಸ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ. ಪ್ರತಿ ತಿಂಗಳು 6,000 ರೂ. ಕೊಡಬೇಕು, ಇಲ್ಲದಿದ್ದರೆ ಮಂಗಳೂರಿನಲ್ಲಿ ಜೀವಿಸಲು ಬಿಡುವುದಿಲ್ಲವೆಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

 ನಮಗೆ ಆಡಳಿತ ವರ್ಗ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ರಕ್ಷಣೆಯ ಅಗತ್ಯವಿದೆ. ಅಲ್ಲದೆ, ಇಂತಹ ಕಿರುಕುಳ ನೀಡುವ ವ್ಯಕ್ತಿಗಳ ವಿರುದ್ಧ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಿವರ್ತನಾ ಚಾರಿಟೇಬಲ್ ಟ್ರಸ್ಟ್‌ನ ಕೋಶಾಕಾರಿ ಶ್ರೀನಿ, ಪ್ರಿಯಾ, ರೇಖಾ, ದಿವ್ಯಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News