ಇರಾ: ದಡಾರ ಮತ್ತು ರುಬೆಲ್ಲಾ ಲಸಿಕೆ ಅಭಿಯಾನಕ್ಕೆ ಚಾಲನೆ

Update: 2017-02-08 15:00 GMT


ಕೊಣಾಜೆ, ಫೆ.8: ಇರಾ ಗ್ರಾಮದ ತಾಳಿತ್ತಬೆಟ್ಟು ದ.ಕ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುವ ದಡಾರ ಮತ್ತು ರುಬೇಲ್ಲಾ ಲಸಿಕಾ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅವರು ಲಸಿಕಾ ಅಭಿಯಾನದ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಲಸಿಕೆಯ ಕುರಿತಾಗಿ ಹರಡಿರುವ ಯಾವುದೇ ವದಂತಿಗಳಿಗೆ ಕಿವಿಗೊಡದೆ ಮಕ್ಕಳ ಆರೋಗ್ಯ ದೃಷ್ಟಿಯಿಂದ ಎಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಮುರಳೀಧರ ಭಂಡಾರಿ, ಎಸ್.ಡಿ.ಎಂ.ಸಿ ಸದಸ್ಯರಾದ ಮೊಯಿದಿನ್ ಕುಂಞಿ, ಮಂಚಿ ಆರೋಗ್ಯದ ಕೇಂದ್ರದ ಸಿಬ್ಬಂದಿ ಸುಶೀಲಾ, ಆರೋಗ್ಯ ಸಹಾಯಕಿ ಇಂದಿರಾ, ಶಾಲಾ ಮುಖ್ಯೋಪಾಧ್ಯಾಯಿನಿ ಸುಜತಾ, ಶಿಕ್ಷಕಿ ಶಶಿ ಮುಂತಾದವರು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಜಾನ್ ಅಂತೋನಿ ಫೆರ್ನಾಂಡಿಸ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News