×
Ad

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Update: 2017-02-08 20:43 IST

ಉಡುಪಿ, ಫೆ.8: ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಬಡಗುಬೆಟ್ಟು ಕ್ರೆಡಿಟ್ ಕೋ-ಆಪ ರೇಟಿವ್ ಸೊಸೈಟಿ, ಮಲ್ಪೆ ಲಯನ್ಸ್ ಮತ್ತು ಲಯನೆಸ್ ಕ್ಲಬ್‌ಗಳ ಸಹಭಾಗಿತ್ವದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ರಕ್ತಗುಂಪಿನ ವರ್ಗೀಕರಣ ಹಾಗೂ ಹಿಮೋಗ್ಲೋಬಿನ್ ಪರೀಕ್ಷೆ ಕಾರ್ಯಕ್ರಮ ಇತ್ತೀಚೆಗೆ ಜರಗಿತು.

ಬಡಗುಬೆಟ್ಟು ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ಇಂದ್ರಾಳಿ ಜಯಕರ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಕನ್ಯಾ ಮೇರಿ ಜೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಲಯನ್ಸ್ ಮಾಜಿ ಜಿಲ್ಲಾ ಗರ್ವನರ್ ಶ್ರೀಧರ್ ಶೇಣವ, ಲಯನ್ ವಲಯಾಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಜಿಲ್ಲಾ ರಕ್ತನಿಧಿಯ ಡಾ.ಶಶಿಕುಮಾರ್ ಉಪಸ್ಥಿತರಿದ್ದರು.

ಎನ್‌ಎಸ್‌ಎಸ್ ಯೋಜನಾಧಿಕಾರಿ ರಮಾನಂದ ರಾವ್ ಸ್ವಾಗತಿಸಿದರು. ಯೋಜನಾಧಿಕಾರಿ ಮಲ್ಲಿಕಾ ಸಹಕರಿಸಿದರು. ಮೇಧಾಶ್ರೀ ವಂದಿಸಿದರು. ಸ್ವಸ್ತಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News