ಕಾರು ಢಿಕ್ಕಿ: ಮಹಿಳೆ ಮೃತ್ಯು
Update: 2017-02-08 22:31 IST
ಬ್ರಹ್ಮಾವರ, ಫೆ.8: ಉಪ್ಪೂರು ಕುದ್ರುಬೆಟ್ಟಿನ ಮಿಷನ್ ರೋಪಿಂಗ್ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.7ರಂದು ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಉಪ್ಪೂರು ಕುದ್ರುಬೆಟ್ಟು ನಿವಾಸಿ ಮಹಾಲಕ್ಷ್ಮೀ(78) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ 7ಗಂಟೆಗೆ ರಸ್ತೆ ದಾಟುತ್ತಿದ್ದಾಗ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆ ಹೋಗುತ್ತಿದ್ದ ಕಾರು ಢಿಕ್ಕಿ ಹೊಡೆಯಿತು. ಇದ ರಿಂದ ಗಂಭೀರವಾಗಿ ಗಾಯಗೊಂಡ ಅವರು ಮಧ್ಯಾಹ್ನ 2ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.