. ಶಿವಮೊಗ್ಗ: ಯುವತಿ ಸಾವು ಪ್ರಕರಣ ಸಮಗ್ರ ಮಾಹಿತಿ ಸಂಗ್ರಹ
Update: 2017-02-08 22:51 IST
ಶಿವಮೊಗ್ಗ, ಫೆ.8: ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇತ್ತೀಚೆಗೆ ಯುವತಿಯೋರ್ವಳು ಜ್ವರದಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಮಾಹಿತಿ ಸಂಗ್ರಹಿಸಲು ಮುಂದಾಗಿದ್ದು, ಯುವತಿಯ ಸಾವಿಗೆ ಕಾರಣವಾದ ರೋಗದ ವಿವರಗಳ ಬಗ್ಗೆ ಇಲ್ಲಿಯವರೆಗೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಅರಸಾಳು ಗ್ರಾಮದ ಯುವತಿ ಅಂಜಲಿ (17) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಇವರನ್ನು ರಿಪ್ಪನ್‌ಪೇಟೆಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಜ್ವರದ ಪ್ರಮಾಣ ಜಾಸ್ತಿಯಾಗಿದ್ದರಿಂದ ಕಳೆದ ಸೋಮವಾರದಂದು ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗಮಧ್ಯದಲ್ಲಿಯೇ ಅವರು ಮೃತಪಟ್ಟಿದ್ದರು.
ಈ ನಡುವೆ ಜಿಲ್ಲಾ ಆರೋಗ್ಯ ಇಲಾಖೆಯು ಯುವತಿಯ ಸಾವಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಕಲೆ ಹಾಕಲು ಮುಂದಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.