×
Ad

ಎಡಿಎಂಕೆ ಒಡಕಿನಲ್ಲಿ ಬಿಜೆಪಿ ಪಾತ್ರವಿಲ್ಲ: ನಾಯ್ಡು

Update: 2017-02-08 23:38 IST

 ಈ ಮಧ್ಯೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಎಡಿಎಂಕೆಯಲ್ಲಿ ಒಡಕು ಮೂಡಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಪ್ರಸಕ್ತ ಬಿಕ್ಕಟ್ಟಿನಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲವೆಂದವರು ಸ್ಪಷ್ಟಪಡಿಸಿದ್ದಾರೆ.

ಆದಾಗ್ಯೂ, ರಾಜ್ಯಪಾಲ ವಿದ್ಯಾಸಾಗರ್‌ರಾವ್ ಅವರು ಚೆನ್ನೈಗೆ ಆಗಮಿಸದಿರುವುದರಿಂದ, ಶಶಿಕಲಾ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ವಿಳಂಬವುಂಟಾಗಿದೆ. ಈ ವಿಷಯವಾಗಿ ಯಾವ ರೀತಿಯಲ್ಲಿ ಮುಂದುವರಿಯಬೇಕೆಂಬ ಬಗ್ಗೆ ರಾಜ್ಯಪಾಲರು ಕೇಂದ್ರದ ಜೊತೆ ಸಂಪರ್ಕದಲ್ಲಿರುವುದಾಗಿ ಮೂಲಗಳು ತಿಳಿಸಿವೆ.
  ಕಳೆದ ರವಿವಾರ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಪನ್ನೀರ್‌ಸೆಲ್ವಂ ಅವರ ರಾಜೀನಾಮೆಯನ್ನು ಸ್ವೀಕರಿಸಿದ್ದರೂ, ಹುದ್ದೆಯಲ್ಲಿ ತಾತ್ಕಾಲಿಕವಾಗಿ ಮುಂದುವರಿಯುವಂತೆ ಸೂಚಿಸಿದ್ದರು. ದಿಲ್ಲಿಯಲ್ಲಿ ಕೇಂದ್ರ ಸಚಿವರೊಬ್ಬರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಚೆನ್ನೈಗೆ ಆಗಮಿಸುವ ಬದಲು ಮುಂಬೈಗೆ ತೆರಳಿರುವುದು ಹಲವರ ಹುಬ್ಬೇರಿಸಿತ್ತು.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News