×
Ad

ಮಾನವೀಯ, ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Update: 2017-02-09 18:00 IST

 ಮಂಗಳೂರು, ಫೆ.9: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುತ್ತಿರುವ ಪ.ಗೋ.ಸಂಸ್ಮರಣಾ ಗ್ರಾಮೀಣ, ಮಾನವೀಯ ಹಾಗೂ ಅಭಿವೃದ್ಧಿಪರ ವರದಿಗಾರಿಕೆ ಪ್ರಶಸ್ತಿಗಾಗಿ ದ.ಕ., ಉಡುಪಿ, ಉತ್ತರ ಕನ್ನಡ,ಕೊಡಗು, ಚಿಕ್ಕಮಗಳೂರು, ಕಾಸರಗೋಡು ಜಿಲ್ಲೆಗಳ ಕನ್ನಡದ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಅರ್ಜಿ ಸಲ್ಲಿಸುವವರ ವಯಸ್ಸು 45ಕ್ಕೆ ಮೀರಿರಬಾರದು. ಪ್ರಶಸ್ತಿಯ ಮೊತ್ತ 10 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. 2016ನೆ ಸಾಲಿನ ಪ್ರಶಸ್ತಿಗೆ 2016ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು. ಪ್ರಶಸ್ತಿಗೆ ಅರ್ಜಿಸಲ್ಲಿಸುವವರು ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು ಫೆ.28 ಕೊನೆಯ ದಿನಾಂಕವಾಗಿದೆ.

ಆಸಕ್ತರು ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಉರ್ವಮಾರ್ಕೆಟ್ ಮಂಗಳೂರು -6 ಇಲ್ಲಿಗೆ ಅರ್ಜಿ ಕಳುಹಿಸಲು ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News