×
Ad

ಫೆ.18ರಂದು ರಾಜ್ಯ ಮಟ್ಟದ ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆ

Update: 2017-02-09 18:54 IST

ಚಿಕ್ಕಮಗಳೂರು, ಫೆ.10: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಫೆ.18 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಜರುಗಲಿರುವ ಸ್ಪರ್ಧೆಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲನೇ ಹಂತ ಜಿಲ್ಲಾ ಮಟ್ಟದ ಲಿಖಿತ ರಸಪ್ರಶ್ನೆ ಆಯಾ ಜಿಲ್ಲೆಯ ಕೇಂದ್ರ ಕಚೇರಿಯಲ್ಲಿ ನಡೆಯಲಿದೆ.ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಬಹುದಾಗಿದ್ದು, ಮಾ.4 ರಂದು ರಾಜ್ಯ ಮಟ್ಟದ ಸ್ಪರ್ಧೆ ಬೆಂಗಳೂರಿನಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ಉಪನಿರ್ದೇಶಕರ ಕಚೇರಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕಚೇರಿ, ರಾಜ್ಯ ಸಂಯೋಜಕರಾದ ಆರ್.ಎಸ್ ಪಾಟೀಲ್ ಮೊ:9448867705 ಹಾಗೂ ಸಹಸಂಚಾಲಕರಾದ ಬಿ. ದೊಡ್ಡಬಸಪ್ಪ, ಮೊ:9880656200 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News