ಮೂಡುಬಿದಿರೆ: ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಉಚಿತ ಶಿಕ್ಷಣಕ್ಕೆ ಆಯ್ಕೆ
ಸುಳ್ಯ, ಫೆ. 8: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಯುವ ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಉಚಿತ ಶಿಕ್ಷಣಕ್ಕಾಗಿ ಫಲಾನುಭವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಳ್ವಾಸ್ ನುಡಿಸಿರಿ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಜಾಕೆ ಮಾಧವ ಗೌಡ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸಂಸ್ಥೆಯ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ 6ರಿಂದ 10ನೇ ತರಗತಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯದಡಿಯಲ್ಲಿ ಶೈಕ್ಷಣಿಕ ರಂಗ, ಕ್ರೀಡಾರಂಗ, ಹಾಗೂ ಸಾಂಸ್ಕೃತಿಕ ರಂಗಗಳಲ್ಲಿ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದವರನ್ನು ಆಯಾ ಕ್ಷೇತ್ರಗಳ ಆಯ್ಕೆ ಪ್ರಕ್ರಿಯ ಮೂಲಕ ಆರಿಸಲಾಗುತ್ತದೆ. ಸುಳ್ಯ ತಾಲೂಕಿನ ಆಸಕ್ತ ವಿದ್ಯಾರ್ಥಿಗಳು ಫೆಬ್ರವರಿ 24ರಂದು ಸುಳ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿಭಾನಿತ್ವತ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9 ಗಂಟೆಗೆ ಸೂಕ್ತ ಪರಿಕರಗಳೊಂದಿಗೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಅಯ್ಕೆ ಪ್ರಕ್ರಿಯೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಸಂಪೂರ್ಣ ಉಚಿತ ಶಿಕ್ಷಣ. ವಸತಿ, ಮತ್ತು ಊಟೋಪಚಾರದ ಸೌಲಭ್ಯ ದೊರೆಯಲಿದೆಎಂದವರು ಹೇಳಿದರು.
ಘಟಕದ ಕೋಶಾಧಿಕಾರಿ ಪಿ.ಬಿ.ಸುಧಾಕರ ರೈ, ಎನ್.ಜಯಪ್ರಕಾಶ್ ರೈ, ನಾಗೇಶ್ ರೈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.