ಎತ್ತಿನಹೊಳೆಗಾಗಿ ಆಮರಣಾಂತ ಉಪವಾಸ ಧರಣಿ ಆರಂಭ

Update: 2017-02-10 06:17 GMT

ಮಂಗಳೂರು, ಫೆ.10: ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವದಿ ಸಂರಕ್ಷಣೆಗಾಗಿ ಹಾಗೂ ಅವೈಜ್ಞಾನಿಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ನೇತ್ರಾವತಿ ರಕ್ಷಣಾ ಸಂಯುಕ್ತ ಸಮಿತಿ ಆಶ್ರಯದಲ್ಲಿ ಉಪವಾಸ ಧರಣಿ ಹಾಗೂ ಪ್ರತಿಭಟನೆಗೆ ಇಂದು ಬೆಳಗ್ಗೆ ನಗರದ ಪುರಭವನದ ಬಳಿ ಚಾಲನೆ ದೊರೆಯಿತು.

ನಗರದ ಪುರಭವನದ ಬಳಿಯ ಗಾಂಧೀಜಿ ಪ್ರತಿಮೆಗೆ ಪುಷ್ಪನಮನ ಮಾಡುವ ಮೂಲಕ ಉಪವಾಸ ಧರಣಿಯನ್ನು ಆರಂಭಿಸಲಾಯಿತು. ಬಳಿಕ ಭಾರೀ ಸಂಖ್ಯೆಯಲ್ಲಿ ಸೇರಿರುವ ಪ್ರತಿಭಟನಾಕಾರರು ಮೆರವಣಿಗೆಯಲ್ಲಿ ಸಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿಯದುರು ಉಪವಾಸ ಧರಣಿ ಆರಂಭಿಸಿದ್ದಾರೆ.

ಸಂಸದ ನಳಿನ್ ಕುಮಾರ್ ಕಟೀಲ್, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕೇಮಾರು ಸ್ವಾಮೀಜಿ, ಒಡಿಯೂರು ಮಠದ ಗುರುದೇವಾನಂದ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಸ್ವಾಮೀಜಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಂ.ಮಸೂದ್ ಮೊದಲಾದವರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News