ಫೆ.12ರಂದು ದೇರಳಕಟ್ಟೆಯಲ್ಲಿ ಸಮಸ್ತ ಸ್ವಾಗತ ಸಮಿತಿ ರಚನಾ ಸಭೆ
Update: 2017-02-10 16:10 IST
ಕೊಣಾಜೆ, ಫೆ.10: ದೇರಳಕಟ್ಟೆ ರೇಂಜ್ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಆಶ್ರಯದಲ್ಲಿ ಸಮಸ್ತ ನೇತಾರರ ಅನುಸ್ಮರಣೆ ಹಾಗೂ ಸಮಸ್ತದ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಸೈಯದ್ ಜಿಫ್ರಿ ಮುತ್ತುಕೋಯ ತಂಙಳ್ ಮತ್ತು ಶೈಖುನಾ ಮಿತ್ತಬೈಲ್ ಉಸ್ತಾದ್‌ರಿಗೆ ಅಭಿನಂದನಾ ಕಾರ್ಯಕ್ರಮವು ಫೆ.12ರಂದು 3:30ಕ್ಕೆ ದೇರಳಕಟ್ಟೆ ಗ್ರೀನ್ ಗ್ರೌಂಡ್ ಮನಾರುಲ್ ಹುದಾ ಮದ್ರಸ ಸಭಾಂಗಣದಲ್ಲಿ ನಡೆಯಲಿದೆ.
ದೇರಳಕಟ್ಟೆ ರೇಂಜ್ ಮತ್ತು ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿನ ಸಮಸ್ತದ ಎಲ್ಲಾ ಅಂಗಸಂಸ್ಥೆಗಳ ಸದಸ್ಯರುಹಾಗೂ ಸಮಸ್ತಾಭಿಮಾನಿಗಳು ಸಭೆಯಲ್ಲಿ ಹಾಜರಿರುವಂತೆ ಮದ್ರಸ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಕೊಣಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.