ತಮಿಳುನಾಡು ರಾಜಕೀಯ : ಕೇಂದ್ರಕ್ಕೆ ರಾಜ್ಯಪಾಲರ ವರದಿ
Update: 2017-02-10 21:47 IST
ಚೆನ್ನೈ,ಫೆ.10: ತಮಿಳುನಾಡಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಉಸ್ತುವಾರಿ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ಅವರು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ರಾಜಕೀಯ ಬೆಳವಣಿಗೆಯ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚಿಸಿ ತಯಾರಿಸಿರುವ ಮೂರು ಪುಟಗಳ ವರದಿಯನ್ನು ರಾಜ್ಯಪಾಲರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದಾರೆ.
ಅಧಿಕಾರ ಯಂತ್ರ ದುರುಪಯೋಗವಾದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿ, ಡಿಜಿಪಿ ಜೊತೆ ಚರ್ಚಿಸಿರುವ ರಾಜ್ಯಪಾಲರು ಅಧಿಕಾರಿಗಳ ಮೂಲಕ ರಾಜಕೀಯ ಬೆಳವಣಿಗೆಗಳ ಬಗ್ಗೆ ತೀವ್ರ ನಿಗಾ ವಹಿಸಿದ್ದಾರೆ.
ಯಾರಿಗೂ ಸರಕಾರ ರಚನೆಗೆ ಆಹ್ವಾನ ನೀಡದಿರುವ ಬಗ್ಗೆ ರಾಜ್ಯಪಾಲ ಸಿಎಚ್ ವಿದ್ಯಾಸಾಗರ್ ರಾವ್ ನಿರ್ಧಾರ ಕೈಗೊಂಡಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.