ಫೆ.12ರಂದು ಮದ್ರಸ ವಿದ್ಯಾರ್ಥಿಗಳ ಪ್ರತಿಭೋತ್ಸವ
Update: 2017-02-11 18:47 IST
ಪಡುಬಿದ್ರಿ, ಫೆ.11: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಿಂದ ಅಂಗೀಕೃತವಾದ ಉಡುಪಿ ರೇಂಜ್ ಮಟ್ಟದ ಮದ್ರಸ ವಿದ್ಯಾರ್ಥಿಗಳ ಪ್ರತಿಭೋತ್ಸವವನ್ನು ಫೆ.12ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 5ಗಂಟೆಯ ವರೆಗೆ ಎರ್ಮಾಳ್ ಜಾಮೀಯಾ ಮಸೀದಿ ವಠಾರದಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಉಪಾಧ್ಯಕ್ಷ ಶೈಖುನಾ ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲ್ ಉದ್ಘಾಟಿಸಲಿದ್ದಾರೆ. ಸಂಜೆ 4ಗಂಟೆಗೆ ಆತ್ರಾಡಿ ಖಾಝಿ ಶೈಖುನಾ ವಿ.ಕೆ. ಅಬೂಬಕ್ಕರ್ ಮುಸ್ಲಿಯಾರ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ರೇಂಜ್ ಅಧ್ಯಕ್ಷ ಕೆ.ಎಂ.ಅಬ್ದುಲ್ ರಹಿಮಾನ್ ಫೈಝಿ ಲಿಮಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.