ಸಾಮಾಜಿಕ ಭದ್ರತೆ ಯೋಜನೆ: ಆಧಾರ್, ಬ್ಯಾಂಕ್ ಖಾತೆ ಕಡ್ಡಾಯ
ಚಿಕ್ಕಮಗಳೂರು, ಫೆೆ.11: ಜಿಲ್ಲೆಯಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಾದ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳಡಿ ಪಡೆಯುತ್ತಿರುವ ಪಿಂಚಣಿ ಸೌಲಭ್ಯಗಳನ್ನು ಪಡೆಯಲು ತಮ್ಮ ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ವಿವರಗಳನ್ನು ಕಡ್ಡಾಯವಾಗಿ ಮಾರ್ಚ್ 2017ರೊಳಗಾಗಿ ಸಲ್ಲಿಸತಕ್ಕದ್ದು, ಇಲ್ಲವಾದಲ್ಲಿ ಪಿಂಚಣಿಯನ್ನು ಸ್ಥಗಿತಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.
ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್/ಅಂಚೆ ಖಾತೆಯ ವಿವರಗಳನ್ನು ಈ ವಿಧಾನಗಳ ಮೂಲಕ ಸಲ್ಲಿಸಬಹುದಾಗಿದೆ. ಆಧಾರ್ ಸಂಖ್ಯೆ ಸಂಗ್ರಹಣೆಗಾಗಿ ಸಂಬಂಧಿಸಿದ ರಾಜಸ್ವ ನಿರೀಕ್ಷಕರು/ಗ್ರಾಮ ಲೆಕ್ಕಿಗರು/ಗ್ರಾಮ ಸಹಾಯಕರು ಗ್ರಾಮಗಳಿಗೆ ಭೆೇಟಿ ನೀಡಿದ ಸಂದಭರ್ದಲ್ಲಿ ಪಿಂಚಣಿ ಮಂಜೂರಾತಿ ಆದೇಶ ಸಂಖ್ಯೆ/ ಪಿ.ಪಿ.ಒ.ಐ.ಡಿ ಜೊತೆಗೆ ಆಧಾರ್ ಸಂಖ್ಯೆ, ಅಂಚೆ/ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ನೀಡುವುದು.
ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರ ಮುಖಾಂತರ (ಹೋಬಳಿ ಮಟ್ಟದಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರಗಳು) ಹಾಗೂ ತಾಲೂಕು ಕೇಂದ್ರ/ನಗರ ಪ್ರದೇಶಗಳಲ್ಲಿ ತಾಲೂಕು ಕಚೇರಿಗಳಲ್ಲಿ ಸಂಪರ್ಕಿಸಿ ಅಗತ್ಯ ಮಾಹಿತಿಯನ್ನು ನೀಡಬಹುದಾಗಿದೆ. ಆಧಾರ್ ಸಂಖ್ಯೆ ಪಡೆಯಲು ಈಗಾಗಲೇ ಅರ್ಜಿ ಸಲ್ಲಿಸಿದವರು ಆಧಾರ್ ಸಂಖ್ಯೆ ದೊರೆತಿಲ್ಲವಾದ್ದಲ್ಲಿ, 28 ಅಂಕಿಯ ಈಐಡಿ ಸಂಖ್ಯೆ (ಅಚ್ಟ ಉ್ಞ್ಟಟ್ಝಞಛ್ಞಿಠಿ ಘೆಟ) ಸಂಖ್ಯೆಯನ್ನು ನೀಡಬಹುದಾಗಿದೆ.
ನಿಮ್ಮ ಈಐಡಿ ಸಂಖ್ಯೆಗೆ ಯಶಸ್ವಿಯಾಗಿ ಆಧಾರ್ ಸಂಖ್ಯೆ ಲಭ್ಯವಾದಲ್ಲಿ ಇಲಾಖೆ ವತಿಯಿಂದಲೇ ಅದನ್ನು ಸೇರಿಸಲಾಗುವುದು, ಆಧಾರ್ ಸಂಖ್ಯೆಯನ್ನು ಪಡೆದುಕೊಳ್ಳಲು ಹೋಬಳಿ ಮಟ್ಟದಲ್ಲಿ ಇರುವ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ, ನಗರ ಪ್ರದೇಶಗಳ ಕರ್ನಾಟಕ ಒನ್/ಬೆಂಗಳೂರು ಒನ್ ಹಾಗೂ ಇನ್ನಿತರ ನೋಂದಣಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ.
ಕೇಂದ್ರ ಸರಕಾರದ ನೇರ ಹಣ ಸಂದಾಯ ಯೋಜನೆಯಡಿ ಪ್ರತೀ ಫಲಾನುಭವಿಯು ಸರಕಾರದ ಸವಲತ್ತನ್ನು ಪಡೆಯಲು ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಅಥವಾ ಅಂಚೆ ಖಾತೆ ಸಂಖ್ಯೆ ಕಡ್ಡಾಯವಾಗಿದೆ. ಈ ಮಾಹಿತಿಯನ್ನು ಫಲಾನುಭವಿಗಳು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ನೀಡುವುದು. ಇ-ಮನಿಯಾರ್ಡರ್ ಮೂಲಕ ಪಿಂಚಣಿ ಪಡೆಯುವ ಫಲಾನುಭವಿಗಳು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಇ-ಮನಿಯಾರ್ಡರ್ ಸ್ವೀಕೃತಿ ರಶೀದಿ ಹಾಗೂ ಭಾವಚಿತ್ರವನ್ನು ಅಂಚೆ ಕಚೆೇರಿಗೆ ನೀಡಿ ಅಂಚೆ ಖಾತೆ ತೆರೆಯಲು ಕ್ರಮವಹಿಸುವುದು.
ನಗರ ಪ್ರದೇಶಗಳಲ್ಲಿ ವಾಸವಾಗಿದ್ದು, ಪಿಂಚಣಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ವಾಸಸ್ಥಳ/ವಿಳಾಸ ಬದಲಾವಣೆ ಮಾಡಿದ್ದಲ್ಲಿ ಬದಲಾದ ವಿಳಾಸದ ಜೊತೆಗೆ ಆಧಾರ್ ಜೋಡಣೆ ಬಗ್ಗೆ ಅಗತ್ಯ ಮಾಹಿತಿಯನ್ನು ಸಂಬಂಧಿಸಿದ ಅಟಲ್ ಜೀ ಜನಸ್ನೇಹಿ ಕೇಂದ್ರ/ತಾಲೂಕು ಕಚೇರಿಯಲ್ಲಿ ನೀಡಬಹುದಾಗಿದೆ. ಇಲ್ಲವಾದಲ್ಲಿ ಪಿಂಚಣಿ ಮಂಜೂರು ವಿಳಾಸದಲ್ಲಿ ಫಲಾನುಭವಿ ಲಭ್ಯವಿಲ್ಲದ ಹಿನ್ನೆಲೆಯಲ್ಲಿ ಪಿಂಚಣಿ ಸ್ಥಗಿತಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಪ್ರಕಟನೆ ತಿಳಿಸಿದೆ.