×
Ad

9ನೆ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ದೂರು ದಾಖಲು

Update: 2017-02-12 23:10 IST

ಶಿವಮೊಗ್ಗ, ಫೆ. 12: ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೋರ್ವಳಿಗೆ ವಿವಿಧ ಆಮಿಷವೊಡ್ಡಿ ಲೈಂಗಿಕವಾಗಿ ಬಳಸಿ ಕೊಂಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೋರ್ವನ ವಿರುದ್ಧ ಜಿಲ್ಲೆಯ ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಲಂಡಿಗೆರೆ ಗ್ರಾಮದ ಮಂಜುನಾಥ್ ಎಂಬವನ ವಿರುದ್ಧ ಪೊಲೀಸರು ಈ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿಯು ಟಿ.ವಿ. ನೋಡಲು ಆಗಮಿಸುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ, ಬೆದರಿಸಿ ಅತ್ಯಾಚಾರ ಎಸಗಿದ್ದ. ಈ ವಿಷಯ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ. ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿಯು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಸಂದರ್ಭದಲ್ಲಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿತ್ತು.

ಈ ಬಗ್ಗೆ ಶಿವಮೊಗ್ಗದ ಮಕ್ಕಳ ಸಹಾಯವಾಣಿ ಆಪ್ತ ಸಮಾಲೋಚಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರ ಆಧಾರದ ಮೇಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News