×
Ad

​ಜನವಾದಿ ಮಹಿಳಾ ಸಂಘಟನೆಯಿಂದ ಧರಣಿ

Update: 2017-02-13 14:57 IST

ಮಂಗಳೂರು, ಫೆ.13: ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ರಕ್ಷಣೆ ನೀಡಬೇಕಾದ ಸರಕಾರ, ಪೊಲೀಸ್ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿ ಜನವಾದಿ ಮಹಿಳಾ ಸಂಘಟನೆ (ಜೆಎಂಎಸ್) ಸೋಮವಾರ ದ.ಕ.ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿತು.

ಧರಣಿ ನಿರತರನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಸಾಹಿತಿ ಚಂದ್ರಕಲಾ ನಂದಾವರ ಮಹಿಳೆಯರು ಪ್ರತೀ ಕ್ಷಣವೂ ದೌರ್ಜನ್ಯಕ್ಕೊಳಗಾಗುತ್ತಿದ್ದಾರೆ. ಅವರು ಕೆಲಸ ಮಾಡುವ ಕಡೆ ಸೂಕ್ತ ಭದ್ರತೆ ಇಲ್ಲ. ಪುರುಷ ಪ್ರಧಾನ ಸಮಾಜವು ಮಹಿಳೆಯರ ಬಗ್ಗೆ ತಾರತಮ್ಯ ತಾಳುತ್ತಿದೆ. ಕೇಂದ್ರ ಸರಕಾರವು ನೋಟುಗಳನ್ನು ಅಮಾನ್ಯಗೊಳಿಸಿದ ಬಳಿಕ ಸಾಕಷ್ಟು ಸಂಖ್ಯೆಯ ಮಹಿಳೆಯರು ತೊಂದರೆಗೀಡಾಗಿದ್ದಾರೆ ಎಂದರು.

ಮಹಿಳೆಯರು ತಮ್ಮ ಮೇಲಾಗುವ ದೌರ್ಜನ್ಯದ ವಿರುದ್ಧ ಸುಮ್ಮನಿರದೆ ಹೋರಾಟದ ಮನೋಭಾವ ಬೆಳೆಸಬೇಕು ಎಂದು ಚಂದ್ರಕಲಾ ನಂದಾವರ ಕರೆ ನೀಡಿದರು.
ಜೆಎಂಎಸ್ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಧಾ, ಉಪಾಧ್ಯಕ್ಷೆ ಕಿರಣ ಪ್ರಭಾ, ಮಾಜಿ ಅಧ್ಯಕ್ಷೆ ಹೇಮಲತಾ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News