ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಸಂಸ್ಮರಣೆ
Update: 2017-02-13 17:51 IST
ಮಂಗಳೂರು, ಫೆ.13: ಸಂವೇದನೆ, ಪರಿಶ್ರಮ, ಬದ್ದತೆ ಇದ್ದರೆ ಯಾವುದೇ ಉನ್ನತ ಸ್ಥಾನವನ್ನು ತಲುಪಲು ಸಾಧ್ಯ ಎಂಬುದನ್ನು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ತೋರಿಸಿಕೊಟ್ಟಿದ್ದರೆ. ಬಿಜೆಪಿ ಪಕ್ಷವನ್ನು ಕಟ್ಟಿಬೆಳೆಸುವಲ್ಲಿ ಅವರು ವಹಿಸಿದ ಪಾತ್ರ ಅಪಾರ ಎಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಹೇಳಿದರು.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ಶತಾಬ್ದಿ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ನಡೆದ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪಕ್ಷದ ಜಿಲಾಧ್ಯಕ್ಷ ಸಂಜೀವ ಮಠಂದೂರು, ಮಂಗಳೂರು ನಗರ ದಕ್ಷಿಣ ಕ್ಷೇತ್ರ ಅಧ್ಯಕ್ಷ ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು.