ಫಾದರ್ ಮುಲ್ಲರ್ ನಿಯೋಗ ಮುಖ್ಯಮಂತ್ರಿ ಭೇಟಿ
Update: 2017-02-13 18:52 IST
ಮಂಗಳೂರು, ಫೆ.13: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ನಿಯೋಗವು ಮುಖ್ಯಮಂತ್ರಿಯನ್ನು ಭೇಟಿಯಾಗಿ 60 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾದ ಫಾದರ್ ಮುಲ್ಲರ್ ಕನ್ವೆಂನ್ಷನ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿತು.
ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜನ್ನು ಡೀಮ್ಡ್ ವಿಶ್ವವಿದ್ಯಾನಿಲಯವನ್ನಾಗಿ ಮಾಡಲು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿತು.
ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜರ ನೇತೃತ್ವದ ನಿಯೋಗದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ನಿರ್ದೇಶಕ ರೆ.ಫಾ. ರಿಚರ್ಡ್ ಕುವೆಲೊ, ರೆ.ಫಾ. ರುಡೋಲ್ಫ್ ಡಸ್ಸೋ ಹಾಜರಿದ್ದರು. ಸಚಿವ ತನ್ವೀರ್ ಸೇಠ್, ಶಾಸಕ ಮೊಯ್ದಿನ್ ಬಾವಾ ಉಪಸ್ಥಿತರಿದ್ದರು.