ಮರಕ್ಕೆ ಕಾರು ಢಿಕ್ಕಿ: ಇಬ್ಬರು ಸಾವು ಇಬ್ಬರು ಆಸ್ಪತ್ರೆಗೆ ದಾಖಲು
ಶಿವಮೊಗ್ಗ, ಫೆ. 13: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಯುವಕರು ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಶಿವಮೊಗ್ಗ-ಶಿಕಾರಿಪುರ ರಸ್ತೆಯಲ್ಲಿ ವರದಿ ಯಾಗಿದೆ.
ಕಾರು ಚಾಲನೆ ಮಾಡುತ್ತಿದ್ದ ಶಿಕಾರಿ ುರದ ನಿವಾಸಿ ರೋಹಿತ್ (21) ಹಾಗೂ ಆತನ ಸ್ನೇಹಿತ ಶಿವಮೊಗ್ಗದ ಗೋಪಾಳದ ನಿವಾಸಿ ಆಕಾಶ್ (20) ಮೃತಪಟ್ಟವರೆಂದು ಗುರುತಿಸ ಲಾಗಿದೆ. ರೋಹಿತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟರೆ ಆಕಾಶ್ ಶಿವಮೊಗ್ಗದ ಖಾಸಗಿ ಆಸ್ಪತ್ರೆಯ
ಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಉಡುಪಿಯ ನಿವಾಸಿ ಅಕ್ಷಯ್ (20) ಹಾಗೂ ಮಂಗಳೂರಿನ ಮುಲ್ಕಿಯ ನಿತೀಶ್ (20) ಎಂಬವರು ಗಾಯಗೊಂಡಿದ್ದು, ಇವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಇನ್‌ಸ್ಪೆಕ್ಟರ್ ಹರೀಶ್ ಕೆ. ಪಾಟೀಲ್ ಭೇಟಿಯಿತ್ತು ಪರಿಶೀಲನೆ ನಡೆಸಿದರು.
ಈ ಸಂಬಂಧ ಶಿಕಾರಿಪುರ ಗ್ರಾಮಾಂ ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.