ಗ್ರಾಮ ಲೆಕ್ಕಿಗರಿಗೆ ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಮನವಿ
Update: 2017-02-13 23:18 IST
ಬಂಟ್ವಾಳ,ಫೆ.13: ಗ್ರಾಮ ಲೆಕ್ಕಿಗರಿಗೆ ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಬಂಟ್ವಾಳ ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಪದಾಧಿಕಾರಿಗಳ ನಿಯೋಗವೊಂದು ತಹಶೀಲ್ದಾರರ ಮೂಲಕ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದೆ.
ರಾಜ್ಯದ ಗ್ರಾಮಾಂತರ ಪ್ರದೇಶದಲ್ಲಿ ಹೊಸ ಪಡಿತರ ಚೀಟಿ ಅರ್ಜಿಗಳ ಅರ್ಹತೆಯನ್ನು ಪರಿಶೀಲಿಸುವ ಅಧಿಕಾರ ಕಂದಾಯ ಇಲಾಖೆಯ ಗ್ರಾಮ ಲೆಕ್ಕ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಿ ಆಹಾರ, ನಾಗರಿಕ, ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಕೆ ಇತ್ತೀಚೆಗೆ ಆದೇಶವೊಂದನ್ನು ಹೊರಡಿಸಿತ್ತು.
ಫೆ. 14ರಂದು ಗ್ರಾಮ ಲೆಕ್ಕಿಗರಿಗೆ ಉಪಗ್ರಹ ಆಧಾರಿತ ತರಬೇತಿ ಕಾರ್ಯಾಕ್ರಮದಲ್ಲಿ ಭಾಗವಹಿಸಲಿರುವುದರಿಂದ ಗ್ರಾಮ ಲೆಕ್ಕಿಗರಿಗೆ ಪಡಿತರ ಚೀಟಿ ಪರಿಶೀಲನೆಯಿಂದ ವಿನಾಯಿತಿ ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.