ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Update: 2017-02-13 23:21 IST
ಕಾರವಾರ, ಫೆ.13: ವಿವಾಹಿತ ಮಹಿಳೆಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಳಸಾವಾಡಾದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಯಶೋಧ ನಾಯ್ಕ(46) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರವಾರದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ